ವಿಜಯಪುರ: ಇಡೀ ರಾಜ್ಯವೇ ಶೋಕ ಸಾಗರದಲ್ಲಿ ಮುಳುಗಿದೆ. ನಟ ಪುನೀತ್ ರಾಜ್ ಕುಮಾರ್ ನಿಧನದ ಸುದ್ದಿಯನ್ನು ಇನ್ನೂ ಅರಗಿಸಿಕೊಳ್ಳುವುದಕ್ಕೆ ಸಾಧ್ಯವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಕಿಡಿಗೇಡಿಗಳು ಅವರ ಫೋಟೋಗೆ ಬೆಂಕಿ ಇಟ್ಟು ವಿಕೃತಿ ಮೆರೆದ ಘಟನೆ ನಡೆದಿದೆ.
ಶುಕ್ರವಾರ ಅಪ್ಪು ನಿಧನದ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ಅವರ ಅಭಿಮಾನಿಗಳು ಶ್ರದ್ಧಾಂಜಲಿ ಸಲ್ಲಿಸಿ ಅವರ ಕಟೌಟ್ ಹಾಕಿದ್ದರು. ನಂತರ ಅಲ್ಲಿಂದ ತೆರಳಿದ್ದರು. ಆದರೆ ರಾತ್ರಿ ಹೊತ್ತು ಕಟೌಟ್ ಗೆ ಯಾರೋ ದುಷ್ಕರ್ಮಿಗಳು ಬೆಂಕಿ ಇಟ್ಟಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.


















