ನವದೆಹಲಿ: ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ‘ಎಬಿಪಿ ನ್ಯೂಸ್-ಸಿ ವೋಟರ್’ ಸಮೀಕ್ಷೆ ವರದಿ ತಿಳಿಸಿದೆ.
ಈ ಕುರಿತು ಸುದ್ದಿ ಸಂಸ್ಥೆ ‘ಐಎಎನ್ಎಸ್’ ವರದಿ ಮಾಡಿದೆ. ಆದರೆ ಕಳೆದ ಚುನಾವಣೆಗೆ ಹೋಲಿಸಿದಾಗ ಬಿಜೆಪಿ ಬಹುಮತದಲ್ಲಿ ಭಾರಿ ಇಳಿಕೆ ಕಂಡುಬರಲಿದೆ ಎಂದು ಹೇಳಿದೆ. ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಹಾಗೂ ಸಮಾಜವಾದಿ ಪಕ್ಷದ (ಎಸ್ ಪಿ) ನಡುವೆ ತೀವ್ರ ಪೈಪೋಟಿ ಏರ್ಪಡಲಿದೆ. ಬಹುಜನ ಸಮಾಜ ಪಾರ್ಟಿ (ಬಿಎಸ್ ಪಿ) ಹಾಗೂ ಕಾಂಗ್ರೆಸ್ ಗೆ ಹಿನ್ನಡೆ ಎದುರಾಗಲಿದೆ ಎಂದು ತಿಳಿಸಿದೆ.


















