ನವದೆಹಲಿ: 30 ವರ್ಷಗಳ ಹಿಂದಿನ ರಸ್ತೆ ಅಪಘಾತ ಪ್ರಕರಣದಲ್ಲಿ ಮಾಜಿ ಕ್ರಿಕೆಟಿಗ ಮತ್ತು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರಿಗೆ ಸುಪ್ರೀಂ ಕೋರ್ಟ್ ಗುರುವಾರ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ.
1988ರ ಡಿಸೆಂಬರ್ 27ರಂದು ಪಟಿಯಾಲಾದಲ್ಲಿ ನಡೆದ ಈ ಘಟನೆಯಲ್ಲಿ 65 ವರ್ಷದ ಗುರ್ನಾಮ್ ಸಿಂಗ್ ಎನ್ನುವವರು ಸಾವಿಗೀಡಾಗಿದ್ದರು. ಸುಪ್ರೀಂ ಕೋರ್ಟ್ ಈ ಪ್ರಕರಣದಲ್ಲಿ ಸಿಧು ಅವರಿಗೆ ಈ ಹಿಂದೆ ₹1 ಸಾವಿರ ದಂಡ ವಿಧಿಸಿತ್ತು. ಮೃತನ ಕುಟುಂಬಸ್ಥರು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ಆದೇಶ ನೀಡಿದೆ. ವ್ಯಕ್ತಿಯ ಸಾವಿನ ಕಾರಣಗಳು ‘ಅಸ್ಪಷ್ಟ’ವಾಗಿವೆ ಎಂದು ಸಿಧು ಈ ಪ್ರಕರಣದಲ್ಲಿ ವಾದಿಸಿದ್ದರು.
ಈ ಹಿನ್ನೆಯಲ್ಲಿ ಟ್ವೀಟ್ ಮಾಡಿರುವ ನವಜೋತ್ ಸಿಂಗ್ ಸಿಧು, ನ್ಯಾಯಾಲಯಕ್ಕೆ ತಲೆಬಾಗುವುದಾಗಿ ಹೇಳಿದ್ದಾರೆ.


















