ನ್ಯೂಸ್ ನಾಟೌಟ್: ಬ್ರಹ್ಮಾವರದ ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊತ್ತೂರು ಎಂಬಲ್ಲಿ ಬೆಂಕಿ ಹೊತ್ತಿ ಉರಿದ ಸ್ಥಿತಿಯಲ್ಲಿ ಕಾರು ಪತ್ತೆಯಾಗಿದ್ದು, ಕಾರಿನೊಳಗಿದ್ದ ಇಬ್ಬರು ಸಜೀವ ದಹನವಾಗಿದ್ದಾರೆ. ಇಬ್ಬರೂ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಭಾನುವಾರ ಮುಂಜಾನೆ 3:30 ರ ಹೊತ್ತಿಗೆ ಘಟನೆ ನಡೆದಿದೆ ಎನ್ನಲಾಗಿದೆ. ಕಾರಿನಲ್ಲಿದ್ದ ಬೆಂಗಳೂರು ಆರ್.ಟಿ. ನಗರದ ಯಶವಂತ ಯಾದವ್ ಮತ್ತು ಜ್ಯೋತಿ ಸಜೀವ ದಹನಗೊಂಡಿದ್ದಾರೆ. ಮೂರು ದಿನಗಳ ಹಿಂದಷ್ಟೇ ಇವರ ಮೇಲೆ ಬೆಂಗಳೂರಿನಲ್ಲಿ ನಾಪತ್ತೆ ದೂರು ದಾಖಲಾಗಿತ್ತು.
ಶನಿವಾರ ಮಂಗಳೂರಿನಿಂದ ಹುಸೇನ್ ಎಂಬವರ ಸ್ವಿಫ್ಟ್ ಕಾರನ್ನು ಬಾಡಿಗೆ ಪಡೆದು ಇವರಿಬ್ಬರು ವಿವಿಧ ಸ್ಥಳಗಳಿಗೆ ಹೋಗಿ ಬಂದಿದ್ದಾರೆ ಎನ್ನಲಾಗಿದೆ. ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ ಇವರಿಬ್ಬರು ಸಂಬಂಧಿಕರೇ ಅಥವಾ ಸ್ನೇಹಿತರೇ ಎಂಬುದು ತಿಳಿದು ಬಂದಿಲ್ಲ. ಘಟನೆ ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


















