ನ್ಯೂಸ್ ನಾಟೌಟ್: ಸುಳ್ಯದಲ್ಲಿ ಬೈಕ್ ಮತ್ತು ಕಾರು ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಎರಡು ವಾರಗಳ ಹಿಂದೆ ರಾತ್ರಿ ಶ್ರೀರಾಂಪೇಟೆಯ ಸರಕಾರಿ ಆಸ್ಪತ್ರೆ ಎದುರುಗಡೆ ಮೇನಾಲದ ವಿಷ್ಣುಪ್ರಸಾದ್ ಚಲಾಯಿಸಿಕೊಂಡು ಹೋಗುತ್ತಿದ್ದ ಬೈಕ್ ಮತ್ತು ಬೊಳುಗಲ್ಲಿನ ಯುವಕ ಚಲಾಯಿಸಿಕೊಂಡು ಬರುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿತ್ತು. ಡಿಕ್ಕಿಯ ರಭಸಕ್ಕೆ ವಿಷ್ಣುಪ್ರಸಾದ್ ಮೇನಾಲರವರ ಕೈಕಾಲು ತಲೆಗೆ ತೀವ್ರ ರೂಪದ ಗಾಯಗಳಾಗಿತ್ತು. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಇಂದು ಬೆಳಗ್ಗೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.


















