ನ್ಯೂಸ್ ನಾಟೌಟ್ : ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿ ಬಾಕಿಯಿರುವ ಸುಮಾರು 10 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಧಾನ ಮಂತ್ರಿ ಕಚೇರಿಯು (Prime Minister’s Office – PMO) ಮಂಗಳವಾರ ತಿಳಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಕಾರ್ಯಾಲಯವು, ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ಇಲಾಖೆಗಳು ಸಚಿವಾಲಯಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಸೂಚನೆ ನೀಡಿದ್ದಾರೆ ಎಂದು ಹೇಳಿದೆ.
ವಿವಿಧ ಇಲಾಖೆಗಳ ಉದ್ಯೋ ಗಿಗಳ ಪರಿಸ್ಥಿತಿ, ಮಾನವ ಸಂಪನ್ಮೂಲದ ಸ್ಥಿತಿಗತಿ ಪರಿಶೀಲಿಸಿದ ಪ್ರಧಾನಿ, ಮುಂದಿನ ಒಂದೂವರೆ ವರ್ಷಗಳ ಅವಧಿಯಲ್ಲಿ 10 ಲಕ್ಷ ಮಂದಿಯನ್ನು ನೇಮಿಸಿಕೊಳ್ಳಬೇಕು ಎಂದು ಸೂಚಿಸಿದ್ದಾರೆ ಎಂದು ಟ್ವೀಟ್ ನಲ್ಲಿ ಮಾಹಿತಿ ನೀಡಲಾಗಿದೆ. ಕಳೆ ದ ಏಪ್ರಿಲ್ ತಿಂಗಳಲ್ಲಿಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಪ್ರಧಾನಿ, ನೇಮಕಾತಿ ಪ್ರಕ್ರಿಯೆಗೆ ವೇಗ ಕೊಡಬೇಕು ಎಂದು ಸೂಚಿಸಿದ್ದರು. ರಾಜ್ಯಸಭೆಗೆ ಕಳೆ ದ ಫೆಬ್ರುವರಿ ತಿಂಗಳಲ್ಲಿಮಾಹಿತಿ ನೀಡಿದ್ದಸರ್ಕಾರವು ಮಾರ್ಚ್ 1, 2020ಕ್ಕೆ ದೇಶದಲ್ಲಿಪ್ರಸ್ತುತ 87 ಲಕ್ಷ ಖಾಲಿ ಹುದ್ದೆಗಳಿವೆ ಎಂದು ಹೇಳಿತ್ತು. ನಿರುದ್ಯೋ ಗ ವಿಚಾರವಾಗಿ ಕೇಂದ್ರ ಸರ್ಕಾರವನ್ನು ವಿರೋ ಧ ಪಕ್ಷಗಳು ಸಾಕಷ್ಟು ಬಾರಿ ಟೀಕಿಸಿದ್ದವು. ಇದೀಗ ದೊಡ್ಡ ಮಟ್ಟದಲ್ಲಿ ಉದ್ಯೋ ಗ ನೇಮಕಾತಿಗೆ ಆದೇಶಿಸಿರುವ ಸರ್ಕಾರವು ಈ ಟೀಕೆಗಳಿಗೆ ಉತ್ತರ ಕೊಡಲು ಮುಂದಾಗಿದೆ. ವಿವಿಧ ಸರ್ಕಾರಿ ಇಲಾಖೆ ಮತ್ತು ಸಚಿವಾಲಯಗಳಲ್ಲಿ ಬಾಕಿಯಿರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಇನ್ನು ಮುಂದೆ ಚುರುಕಾಗಲಿದೆ.


















