ನ್ಯೂಸ್ ನಾಟೌಟ್ : ಸಂಪಾಜೆ ಭೂಕಂಪ ಪೀಡಿತ ಪ್ರದೇಶದ ಮನೆಗಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಈ ವೇಳೆ ಅವರು ಜಿಲ್ಲಾ ಪಂಚಾಯತ್ ಇಂಜಿನೀಯರ್ ರವರಿಂದ ವರದಿ ತರಿಸಿ ಸೂಕ್ತ ಕ್ರಮ ಕೈಗೊಳ್ಳುದಾಗಿ ತಿಳಿಸಿದರು. ತಹಶೀಲ್ದಾರ್ ಅನಿತಾ ಲಕ್ಷ್ಮಿ ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ, ಗ್ರಾಮ ಪಂಚಾಯತ್ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ, ಗ್ರಾಮ ಕರಣಿಕ ಮಿಯಾ ಸಾಬ್ ಮುಲ್ಲಾ, ತೆಕ್ಕಿಲ್ ಪ್ರತಿಷ್ಠಾನದ ಟಿ. ಎಮ್. ಶಾಹಿದ್ ತೆಕ್ಕಿಲ್, ಪಂಚಾಯತ್ ಸದಸ್ಯರಾದ ಜಗದೀಶ್ ರೈ, ಅಬೂಸಾಲಿ ಪಿ. ಕೆ. ಎಸ್. ಕೆ. ಹನೀಫ್, ವಿಜಯ ಅಲಡ್ಕ, ರಜನಿ ಶರತ್, ಸೊಸೈಟಿ ನಿರ್ದೇಶಕ ಗಣಪತಿ ಭಟ್ ಪಿ. ಎನ್. ಸಜ್ಜನ ಪ್ರತಿಷ್ಠಾನದ ರಹೀಮ್ ಬೀಜದಕಟ್ಟೆ, ಪ್ರಶಾಂತ್ ವಿ. ವಿ. ಉಪಸ್ಥಿತರಿದ್ದರು.










