ನ್ಯೂಸ್ ನಾಟೌಟ್: ಚಲಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ ನಲ್ಲಿ ಧಗ್ಗನೆ ಬೆಂಕಿ ಹತ್ತಿಕೊಂಡಿರುವ ಘಟನೆ ಪುತ್ತೂರಿನಿಂದ ವರದಿಯಾಗಿದೆ.
ಮಯೂರ ಚಿತ್ರ ಮಂದಿರದ ಸಮೀಪ ದುರ್ಘಟನೆ ಸಂಭವಿಸಿದೆ. ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸಹಕಾರದಿಂದ ಇಂಜಿನಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ದುರಂತದ ಸಂದರ್ಭದಲ್ಲಿ ಬಸ್ ನಲ್ಲಿ ಹಲವಾರು ಜನರಿದ್ದರು. ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಬ್ಯಾಟರಿಯಲ್ಲಿ ಉಂಟಾದ ತಾಂತ್ರಿಕ ದೋಷದಿಂದಾಗಿ ಘಟನೆ ನಡೆದಿದೆ ಎನ್ನಲಾಗಿದೆ.


















