ನ್ಯೂಸ್ ನಾಟೌಟ್ : ಕೇವಲ ಹತ್ತು ದಿನದ ಅವಧಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ಹೆಣ ಬಿದ್ದಿದೆ. ಇಡೀ ಕರಾವಳಿ ಈಗ ಉದ್ವಿಗ್ನ ಸ್ಥಿತಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಕೋಮು ಭಾವನೆ ಕೆರಳಿಸುವ ಯಾವುದೇ ಸುದ್ದಿಗಳನ್ನು ಶೇರ್ ಮಾಡಬಾರದು. ಹಾಗೆ ಮಾಡಿದ್ದೇ ಆದರೆ ಅಂತಹ ಕಿಡಿಗೇಡಿಗಳಿಗೆ ಪೊಲೀಸ್ ಭಾಷೆಯಲ್ಲಿ ಉತ್ತರಿಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ಎಚ್ಚರಿಸಿದ್ದಾರೆ. ಅಲ್ಲದೆ ಜನರು ಗಾಳಿ ಸುದ್ದಿಗಳಿಗೆ ಕಿವಿಗೊಡಬಾರದು. ಕಾನೂನು ಸುವ್ಯವಸ್ಥೆಗೆ ದಕ್ಕೆ ತರುವ ಕೆಲಸ ಮಾಡಬಾರದು ಎಂದು ಇದೇ ವೇಳೆ ಖಡಕ್ ಆಗಿ ಸೂಚಿಸಿದ್ದಾರೆ.










