ನ್ಯೂಸ್ ನಾಟೌಟ್: ಶಿರಾಡಿ ಘಾಟ್ ನಲ್ಲಿ ಮತ್ತೆ ಭೂಕುಸಿತ ಸಂಭವಿಸಿದೆ. ಹೀಗಾಗಿ ವಾಹನಗಳ ಸಂಚಾರ ನಿಷೇಧಿಸಿ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪ ಗುರುವಾರ ಬೆಳಗ್ಗೆ ಮತ್ತೆ ಭೂಕುಸಿತ ಸಂಭವಿಸಿದೆ. ಇದರಿಂದ ರಸ್ತೆ ಸಂಚಾರಕ್ಕೆ ಭಾರಿ ತೊಂದರೆ ಆಗಿದ್ದರಿಂದ ಘನ ವಾಹನಗಳು ಸಂಚರಿಸದಂತೆ ನಿರ್ಬಂಧಿಸಲಾಗಿದೆ. ಲಘು ವಾಹನಗಳ ಏಕಮುಖ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕೆಲವು ದಿನಗಳ ಹಿಂದೆಯಷ್ಟೇ ದೋಣಿಗಲ್ ನಲ್ಲಿ ಭೂಕುಸಿತ ಸಣ್ಣ ಪ್ರಮಾಣದಲ್ಲಿ ಸಂಭವಿಸಿದ್ದನ್ನು ಸ್ಮರಿಸಬಹುದು.


















