ನ್ಯೂಸ್ ನಾಟೌಟ್: ಸಂಪಾಜೆ ಗ್ರಾಮದ ಪಡ್ಪು ಕುಶಾಲಪ್ಪ ಗೌಡ ಮಂಗಳವಾರ ನಿಧನರಾಗಿದ್ದಾರೆ.
ಅವರಿಗೆ 80 ವರ್ಷ ವಯಸ್ಸಾಗಿತ್ತು. ಮೃತರು ನಾಲ್ವರು ಗಂಡು ಮಕ್ಕಳು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಇವರು ಸಂಪಾಜೆಯ ಕೈಪಡ್ಕ ಬಳಿ ಇರುವ ಕಂಪನಿ ತೋಟದಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲ ತೋಟದ ಉಸ್ತುವಾರಿಯನ್ನು ನೋಡಿಕೊಳ್ಳುವ ಕೆಲಸ ಮಾಡಿದ್ದರು.


















