ನ್ಯೂಸ್ ನಾಟೌಟ್ : ಅತಿಯಾದ ವೇಗದಿಂದ ಬಂದ ಕಾರೊಂದು ನಿಯಂತ್ರಣ ತಪ್ಪಿ ನಿಲ್ಲಿಸಿದ ಕಾರಿಗೆ ಗುದ್ದಿ ಪಲ್ಟಿಯಾದ ಘಟನೆ ಮಂಗಳವಾರ ಸಂಜೆ ೪.೪೯ಕ್ಕೆ ಸಂಪಾಜೆಯ ಚೌಕಿ ಬಳಿ ನಡೆದಿದೆ.

ಸದ್ಯ ಕಾರಿನಲ್ಲಿದ್ದವರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಕಾರು ಅತಿ ವೇಗದಲ್ಲಿ ಬಂದು ಅಂಗಡಿಯೊಂದರ ಸಮೀಪ ನಿಲ್ಲಿಸಿದ ಕಾರಿಗೆ ಡಿಕ್ಕಿ ಹೊಡೆದು ನಂತರ ಪಲ್ಟಿಯಾಗಿದೆ ಎಂದು ಪ್ರತ್ಯಕ್ಷ ದರ್ಶಿಗಳು ನ್ಯೂಸ್ ನಾಟೌಟ್ ಗೆ ಪ್ರತಿಕ್ರಿಯಿಸಿದ್ದಾರೆ.

ಘಟನೆಯಲ್ಲಿ ಸ್ಕೂಟಿ ಕೂಡ ಪುಡಿಪುಡಿಯಾಗಿದೆ. ಕಲ್ಲುಗುಂಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದ ಸಮಯದಲ್ಲಿ ಕೆಲವರು ಅಂಗಡಿ ಬಳಿ ನಿಂತಿದ್ದರು ಎನ್ನಲಾಗಿದೆ. ಅದೃಷ್ಟವಶಾತ್ ಅವರೆಲ್ಲರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.


















