ನ್ಯೂಸ್ ನಾಟೌಟ್: ಸಚಿವ ಎಸ್ ಅಂಗಾರ ಅವರು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಅವರು ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂದಿನ ಎರಡು ದಿನ ಅವರು ಯಾವುದೇ ಜನ ಸಂಪರ್ಕ ಕಾರ್ಯದಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿದು ಬಂದಿದೆ.