ನ್ಯೂಸ್ ನಾಟೌಟ್ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡು ಮೂಲದ ಪಿಡಿಒ ಇಂದು (ಗುರುವಾರ) ಬೆಳಗ್ಗೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಮೃತ ಯುಡಿ ಶೇಖರ್ ಅವರಿಗೆ (೫೫) ವರ್ಷವಾಗಿತ್ತು. ಇವರು ಪ್ರಸ್ತುತ ಸುಬ್ರಹ್ಮಣ್ಯದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅವರಿಗೆ ಬೆಳಗ್ಗೆ ಇದ್ದಕ್ಕಿದ್ದಂತೆ ಹೃದಯಾಘಾತವಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನವನ್ನು ಮಾಡಲಾಗಿದೆ. ಆದರೆ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇವರು ಗುತ್ತಿಗಾರು, ಅರಂತೋಡು, ಐವರ್ನಾಡು ಸೇರಿದಂತೆ ಹಲವು ಕಡೆ ಪಿಡಿಒ ಆಗಿ ಕೆಲಸ ನಿರ್ವಹಿಸಿದ್ದಾರೆ. ಮೃತರು ಪತ್ನಿ ಗೀತಾ ಶೇಖರ್, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.


















