ನ್ಯೂಸ್ ನಾಟೌಟ್: ಏಕಾಏಕಿ ಅನಾರೋಗ್ಯದಿಂದ ಮಂಗಳೂರಿನ ನರ್ಸಿಂಗ್ ಕಾಲೇಜು ಒಂದರ ಹಾಸ್ಟೆಲ್ನ 137 ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಘಟನೆ ಸೋಮವಾರ ನಡೆದಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಮಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ವಿಷಾಹಾರ ಸೇವನೆಯ ಶಂಕೆ ವ್ಯಕ್ತವಾಗಿದ್ದು, ಬಹುತೇಕ ವಿದ್ಯಾರ್ಥಿಗಳಲ್ಲಿ ವಾಂತಿ, ತಲೆಸುತ್ತುವಿಕೆ ಕಂಡು ಬಂದಿದೆ. ತಕ್ಷಣ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಆರೋಗ್ಯ ಸಮಸ್ಯೆಗಳು ಕಂಡು ಬಂದ ವಿದ್ಯಾರ್ಥಿಗಳನ್ನು ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ.










