ನ್ಯೂಸ್ ನಾಟೌಟ್: ಪುತ್ತೂರಿನ ತಿಂಗಳಾಡಿಯ ಅಂಗಡಿಯೊಂದರಲ್ಲಿ ಹಿಂದೂ ಯುವತಿಗೆ ಅನ್ಯಕೋಮಿನ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ.
ಈ ಘಟನೆಗೆ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಮಾತ್ರವಲ್ಲ ನಾಳೆ ಬಂದ್ ಗೆ ಬೆಂಬಲ ವ್ಯಕ್ತಪಡಿಸುವಂತೆ ಸೂಚಿಸಲಾಗಿದೆ. ಜತೆಗೆ ಖಂಡನಾ ಸಭೆ ನಡೆಯಲಿದೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ಹಿಂದೂ ಹೆಣ್ಮಕ್ಕಳಿಗೆ ಕರಾವಳಿಯ ಕೆಲವು ಕಡೆ ಕಹಿ ಘಟನೆಗಳಾಗಿರುವ ಬಗ್ಗೆ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ.


















