ನ್ಯೂಸ್ ನಾಟೌಟ್: ಗುಂಡು ಹೊಡೆದುಕೊಂಡು ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ಸಮೀಪದ ಮೈತಾಡಿ ಗ್ರಾಮದಲ್ಲಿನಡೆದಿದೆ.
ಮೈತಾಡಿ ಗ್ರಾಮದ ಕುಞರ ರಾಮು ಎಂಬು ವವರ ಪುತ್ರ ಶರತ್ ಪೂವಯ್ಯ(33) ಎಂಬುವವರೇ ಸಾವನ್ನಪ್ಪಿರುವ ವ್ಯಕ್ತಿ. ಈತ ತನ್ನ ವಾಸದ ಮನೆಯ ಬಳಿಯಲ್ಲೆ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


















