ನ್ಯೂಸ್ ನಾಟೌಟ್ : ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ನಾಲ್ಕು ವರ್ಷದ ಬಾಲಕನೊಬ್ಬ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಕಡಬ-ಪಂಜ ಕೋಂಡಿಬಾಳ ಎಂಬಲ್ಲಿ ಗುರುವಾರ ಸಂಜೆ ದುರ್ಘಟನೆ ಸಂಭವಿಸಿದೆ.
ಕಡಬದಿಂದ ಕೋಡಿಂಬಾಳ ಕಡೆಗೆ ತೆರಳುತ್ತಿದ್ದ ರಿಕ್ಷಾಕ್ಕೆ ಎದುರಿನಿಂದ ಬರುತ್ತಿದ್ದ ಪಿಕಪ್ ಡಿಕ್ಕಿ ಹೊಡೆದಿದೆ. ಇದರಿಂದ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪುಟ್ಟ ಕಂದಮ್ಮ ನವೀನ್ ಎಂಬುವವರ ಪುತ್ರ ಹಾರ್ದಿಕ್ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಕಡಬ ಸಮುದಾಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಮೂಲಕ ಕರೆದುಕೊಂಡು ಹೋಗುತ್ತಿದ್ದಾಗ ಬಾಲಕ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.


















