ನ್ಯೂಸ್ ನಾಟೌಟ್: ಛತ್ತಿಸ್‌ಗಡ ರಾಜ್ಯದ ಬಲೋಡಾ ಬಜಾರ್-ಭಟಪರಾ ಜಿಲ್ಲೆಯಲ್ಲಿ ಟ್ರಕ್ ಮತ್ತು ಲಾರಿ ನಡುವಿನ ಭೀಕರ ಅಪಘಾತದಲ್ಲಿ ಕನಿಷ್ಠ 11ಮಂದಿ ಸ್ಥಳದಲ್ಲೇ ಅಸುನೀಗಿ ಎಂಟು ಮಂದಿ ಗಾಯಗೊಂಡ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.
ಗಾಯಾಳುಗಳನ್ನು ರಾಯಪುರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಪ್ರಯಾಣಿಕರೆಲ್ಲರೂ ಸಂಬಂಧಿಕರಾಗಿದ್ದು, ಖಾಸಗಿ ಕಾರ್ಯಕ್ರಮ ಮುಗಿಸಿ ವಾಪಾಸಾಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.


















