ಬೆಂಗಳೂರು: ಖ್ಯಾತ ಚಲನಚಿತ್ರ ನಟ ದರ್ಶನ್ ಮಾಲೀಕತ್ವದ ಮೈಸೂರಿನಲ್ಲಿರುವ ಫಾರ್ಮ್ ಹೌಸ್ ನಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಲಾಗಿರುವ ಪ್ರಕರಣವಾಗಿ ತಡವಾಗಿ ಬೆಳಕಿಗೆ ಬಂದಿದೆ. ಟಿ ನರಸೀಪುರ ಫಾರ್ಮ್ ಹೌಸ್ ನಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಅಪ್ರಾಪ್ತ ಬಾಲಕಿಯ ಮೇಲೆ ಸೋಮವಾರ ರಾತ್ರಿ ಅತ್ಯಾಚಾರ ನಡೆದಿದೆ ಎನ್ನಲಾಗಿದೆ. ಕುದುರೆಗೆ ಲಾಳ ಹೊಡೆಯುವ ಕೆಲಸ ಮಾಡಿಕೊಂಡಿದ್ದ ಕಾರ್ಮಿಕ ಅತ್ಯಾಚಾರ ಮಾಡಿದ್ದು ಆತನನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.










