ಪುತ್ತೂರು: ಇಲ್ಲಿನ ಎಪಿಎಂಸಿ ರಸ್ತೆಯಲ್ಲಿ ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಮೂವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೈಕ್ ಸವಾರ ಹಾಗೂ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.