ವೆಲ್ಲಿಂಗ್ಟನ್ : ಒಮೈಕ್ರಾನ್ ಪ್ರಕರಣಗಳು ಹೆಚ್ಚಿದಂತೆ ಕೋವಿಡ್ ನಿಯಮಗಳನ್ನು ಕಠಿಣಗೊಳಿಸಿರುವ ನ್ಯೂಜಿಲೆಂಡ್ ನ ಪ್ರಧಾನಿ ಜೆಸಿಂದಾ ಆರ್ಡೆನ್ ಅವರು ಸ್ವಂತ ಮದುವೆಯನ್ನೇ ರದ್ದುಗೊಳಿಸಿದ್ದಾರೆ. ದೀರ್ಘಕಾಲದ ಜೊತೆಗಾರ ಕ್ಲಾರ್ಕ್ ಗೆಫಾರ್ಡ್ ಅವರ ಜೊತೆ ಆರ್ಡೆನ್ ಅವರ ವಿವಾಹವನ್ನು ಮುಂದಿನ ವಾರಗಳಲ್ಲಿ ನಿಶ್ಚಯಿಸಲಾಗಿತ್ತು. ಆದರೆ ದಿನಾಂಕವನ್ನು ಘೋಷಿಸಲಾಗಿರಲಿಲ್ಲ. ಕೋವಿಡ್ ಕಠಿಣ ನಿಯಮಗಳ ಹೇರಿಕೆಯಿಂದ ತಮ್ಮ ಮದುವೆ ರದ್ದುಗೊಂಡ ಬಗೆಗಿನ ಪ್ರಶ್ನೆಗೆ ‘ಜೀವನ ಎಂದರೆ ಹೀಗೆಯೇ’ ಎಂದು ಜೆಸಿಂದಾ ಉತ್ತರಿಸಿದ್ದಾರೆ.










