ಮುಂಬೈ: ಅಶ್ಲೀಲ ಚಿತ್ರ ಪ್ರಕರಣದಲ್ಲಿ ಪೊಲೀಸ್ ವಶದಲ್ಲಿರುವ ಉದ್ಯಮಿ ರಾಜ್ ಕುಂದ್ರಾ ವಿರುದ್ಧ ಮತ್ತೋರ್ವ ನಟಿ ಗಂಭೀರ ಆರೋಪ ಮಾಡಿದ್ದಾಳೆ. ರಾಜ್ ಕುಂದ್ರಾ ತಮ್ಮ ಮೇಲೂ ಲೈಂಗಿಕ ಹಲ್ಲೆ ಮಾಡಿದ್ದರು ಎಂದು ಕಾಮಸೂತ್ರ 3ಡಿ ಸಿನಿಮಾ ಖ್ಯಾತಿಯ ನಟಿ ಶೆರ್ಲಿನ್ ಚೋಪ್ರಾ ಹೇಳಿದ್ದಾರೆ.
ಮೂಲಗಳ ಪ್ರಕಾರ ಕಳೆದ ಏಪ್ರಿಲ್ನಲ್ಲಿಯೇ ರಾಜ್ ಕುಂದ್ರಾ ವಿರುದ್ಧ ಶೆರ್ಲಿನ್ ಚೋಪ್ರಾ ದೂರು ನೀಡಿದ್ದರು. ಆ ದೂರಿನಲ್ಲಿ ರಾಜ್ ಕುಂದ್ರಾ ಬಗ್ಗೆ ಹಲವು ಆರೋಪಗಳನ್ನು ಮಾಡಲಾಗಿದ್ದು, ಪ್ರಮುಖವಾಗಿ ತಮ್ಮ ಮೇಲೆ ರಾಜ್ ಕುಂದ್ರಾ ಲೈಂಗಿಕ ಹಲ್ಲೆ ಮಾಡಿದ್ದರು ಎಂದು ಆರೋಪಿಸಿದ್ದಾರೆ.
‘2019ರ ಆರಂಭದಲ್ಲಿಯೇ ಒಂದು ಬ್ಯುಸಿನೆಸ್ಗಾಗಿ ರಾಜ್ ಕುಂದ್ರಾ ಅವರು ನನ್ನನ್ನು ಕರೆದಿದ್ದರು. ಮೀಟಿಂಗ್ ಮುಗಿದ ಬಳಿಕ ಅವರು ನನ್ನ ಜೊತೆ ಅಸಭ್ಯವಾಗಿ ವರ್ತಿಸಲು ಶುರು ಮಾಡಿದರು. ಇದರಿಂದ ನಮ್ಮ ನಡುವೆ ಜಗಳ ಶುರುವಾಯಿತು. ನಾನು ಬೇಡ ಎಂದು ವಿರೋಧಿಸಿದರೂ ಕೂಡ ರಾಜ್ ಕುಂದ್ರಾ ಬಲವಂತವಾಗಿ ಕಿಸ್ ಮಾಡಲು ಬಂದರು. ನನಗೆ ಭಯವಾಯಿತು. ಇದನ್ನೆಲ್ಲ ನಿಲ್ಲಿಸುವಂತೆ ಕೇಳಿಕೊಂಡೆ. ನಂತರ ಅವರನ್ನು ತಳ್ಳಿ ಓಡಿ ಹೋದೆ. ಶೌಚಾಲಯಕ್ಕೆ ತೆರಳಿ ಅಡಗಿಕೊಂಡೆ ಎಂದು ದೂರಿನಲ್ಲಿ ಶೆರ್ಲಿನ್ ಚೋಪ್ರಾ ಹೇಳಿದ್ದಾರೆ ಎನ್ನಲಾಗಿದೆ.










