ನ್ಯೂಸ್ ನಾಟೌಟ್: ಕನ್ನಡ ಚಿತ್ರರಂಗದ ಖ್ಯಾತ ನಟ ಮೋಹನ್ ಜುನೇಜ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಅವರು ಕೊನೆಯುಸಿರೆಳೆದರು ಎಂಬ ಮಾಹಿತಿ ಲಭ್ಯವಾಗಿದೆ. ಅವರ ನಿಧನಕ್ಕೆ ಆಪ್ತರು ಮತ್ತು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.
ನೂರಾರು ಸಿನಿಮಾಗಳಲ್ಲಿ ಅಭಿನಯಿಸಿರುವ ಮೋಹನ್ ಜುನೇಜ ಅವರು ಹಾಸ್ಯ ಪಾತ್ರಗಳ ಮೂಲಕ ಫೇಮಸ್ ಆಗಿದ್ದರು. ‘ಕೆಜಿಎಫ್’ ( KGF 2) ಸಿನಿಮಾದಲ್ಲೂ ಒಂದು ಪಾತ್ರ ಮಾಡಿ ಜನಮನ ಗೆದ್ದಿದ್ದರು. ಬೆಂಗಳೂರು ಉತ್ತರ ತಾಲೂಕಿನ ತಮ್ಮೇನಹಳ್ಳಿಯಲ್ಲಿ ವಾಸವಾಗಿದ್ದ ಮೋಹನ್ ಜುನೇಜ ಅವರು ತಾಯಿ, ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಅನೇಕ ದಿನಗಳಿಂದ ಅನಾರೋ ಗ್ಯ ಸಮಸ್ಯೆಯಿಂದ ಅವರು ಬಳಲುತ್ತಿದ್ದರು. ಆರೋಗ್ಯದಲ್ಲಿ ತೀವ್ರ ಏರುಪೇರು ಆದ ಹಿನ್ನೆಲೆಯಲ್ಲಿ ಹೆಸರಘಟ್ಟ ರಸ್ತೆಯ ಸಪ್ತಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿ ಆಗದೇ ಶುಕ್ರವಾರ (ಮೇ 6) ರಾತ್ರಿ ಮೋಹನ್ ಜುನೇಜ ನಿಧನರಾದರು.


















