ನ್ಯೂಸ್ ನಾಟೌಟ್: ರಾಜ್ಯದ ನೂತನ ಲೋಕಾಯುಕ್ತರಾಗಿ ಹಾಲಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಿದರು.
ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ನೂತನ ಲೋಕಾಯುಕ್ತರಿಗೆ ಪ್ರಮಾಣವಚನ ಬೋಧಿಸಿದರು. ನ್ಯಾ. ಬಿ.ಎಸ್. ಪಾಟೀಲ ಅವರು ಭಗವಂತ, ಸತ್ಯ ಮತ್ತು ನಿಷ್ಠೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕರಿಸಿದ ಬಳಿಕ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೂಗುಚ್ಛ ನೀಡಿ ನೂತನ ಲೋಕಾಯುಕ್ತರನ್ನು ಅಭಿನಂದಿಸಿದರು. ವಸತಿ ಸಚಿವ ವಿ ಸೋಮಣ್ಣ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ, ಪಿ. ರಾಜೀವ್, ಕೆ. ಜೆ. ಜಾರ್ಜ್, ಎಂ. ಬಿ. ಪಾಟೀಲ, ಈಶ್ವರ್ ಖಂಡ್ರೆ, ಮಾಜಿ ಲೋಕಾಯುಕ್ತರಾದ ಎನ್. ಸಂತೋಷ್ ಹೆಗ್ಡೆ, ಪಿ. ವಿಶ್ವನಾಥ್ ಶೆಟ್ಟಿ, ರಾಜ್ಯ ಹೈಕೋರ್ಟ್ ನ ನ್ಯಾಯಮೂರ್ತಿಗಳು, ನ್ಯಾಯಾಂಗ ಇಲಾಖೆ ಅಧಿಕಾರಿಗಳು, ವಕೀಲರು ಮತ್ತು ನೂತನ ಲೋಕಾಯುಕ್ತರ ಕುಟುಂಬದ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ 2022ರ ಜನವರಿ 27ರಂದು ನಿವೃತ್ತರಾಗಿದ್ದರು. ಅಂದಿನಿಂದ ಈ ಹುದ್ದೆ ಖಾಲಿ ಇತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ, ವಿಧಾನಸಭೆ ಮತ್ತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರ ಜತೆ ಸಮಾಲೋಚಿಸಿದ ಬಳಿಕ ಬಿ.ಎಸ್. ಪಾಟೀಲ ಅವರ ಹೆಸರನ್ನು ಲೋಕಾಯುಕ್ತರ ಹುದ್ದೆಗೆ ಶಿಫಾರಸು ಮಾಡಿದ್ದರು. ಅದರಂತೆ ರಾಜ್ಯಪಾಲರು ನೇಮಕಾತಿ ಆದೇಶ ಹೊರಡಿಸಿದ್ದರು.



















ನೂತನ ಲೋಕಾಯುಕ್ತರಿಗೆ, ನಾನು ಅವರನ್ನು ಮುಖತಃ ಕಂಡು ಅಭಿನಂದನೆಗಳನ್ನು ಸಲ್ಲಿಸಿ ದೇವರು ಅವರಿಗೆ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ದೇವರು ಶಕ್ತಿ ಕೊಡಲಿ ಅಂತ ಹೇಳಿಬಂದಿದ್ದೇನೆ.
ಅವರನ್ನು ನನ್ನ ಕಂಪ್ಲೆಂಟ್ ವಿಚಾರದಲ್ಲಿ ಎರಡು ಸಲ ಭೇಟಿ ಮಾಡಿ ದ್ದನ್ನು ನೆನಪಿಸಿದರು.ಒಳ್ಳೆಯ ಆಯ್ಕೆ.