ನ್ಯೂಸ್ ನಾಟೌಟ್: ಕಳೆದ ಹಲವು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಮಾಡಿರುವ ಸಾಧನೆಗಾಗಿ ಪತ್ರಕರ್ತ ಹೇಮಂತ್ ಸಂಪಾಜೆಯವರಿಗೆ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ 2022 ನೇ ಸಾಲಿನ ಪ್ರತಿಷ್ಠಿತ ‘ಫೀಲ್ಡ್ ಮಾರ್ಷಲ್ ಕೆ,ಎಂ.ಕಾರಿಯಪ್ಪ’ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷರಾಗಿರುವ ಡಾ ಎನ್.ಕೆ.ಶಿವಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶನಿವಾರ ಬೆಳಗ್ಗೆ 10 ಗಂಟೆಗೆ ಮೈಸೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ನೂರಾರು ಮಾಜಿ ಯೋಧರು ಹಾಗೂ ಗಣ್ಯರ ಸಮ್ಮುಖದಲ್ಲಿ ಹೇಮಂತ್ ಸಂಪಾಜೆಯವರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ ಎಂದು ತಿಳಿಸಲಾಗಿದೆ. ಹೇಮಂತ್ ಸಂಪಾಜೆಯವರು ರಾಜ್ಯದ ಪ್ರಮುಖ ಮಾಧ್ಯಮ ಸಂಸ್ಥೆಗಳಾದ ಹೊಸದಿಗಂತ (ಬೆಂಗಳೂರು ಆವೃತ್ತಿ), ಉದಯವಾಣಿ (ಬೆಂಗಳೂರು ಆವೃತ್ತಿ), ನ್ಯೂಸ್ ಫಸ್ಟ್ ವಾಹಿನಿಯಲ್ಲಿ ಪತ್ರಕರ್ತರಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಪ್ರಸ್ತುತ ವಿಶ್ವೇಶ್ವರ್ ಭಟ್ ಮಾಲೀಕತ್ವದ ವಿಶ್ವವಾಣಿ ಬೆಂಗಳೂರು ಆವೃತ್ತಿಯಲ್ಲಿ ಹಿರಿಯ ಉಪಸಂಪಾದಕರಾಗಿ ಕೆಲಸ ಮಾಡುತ್ತಿದ್ದಾರೆ. 2017 ರಲ್ಲಿ ಹೇಮಂತ್ ಸಂಪಾಜೆಯವರು ಪ್ರತಿಷ್ಠಿತ ಕರ್ನಾಟಕ ಒಲಿಂಪಿಕ್ಸ್ ಸಂಸ್ಥೆ (ಕೆಒಎ) ಪ್ರಶಸ್ತಿ ಪಡೆದುಕೊಂಡಿದ್ದರು.


















