ನ್ಯೂಸ್ ನಾಟೌಟ್: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹುಬ್ಬಳ್ಳಿಯ ಪ್ರೆಸಿಡೆಂಟ್ ಖಾಸಗಿ ಹೋಟೆಲ್ ನಲ್ಲಿ ಹತ್ಯೆಗೀಡಾಗಿದ್ದಾರೆ ಎಂದು ವರದಿಯಾಗಿದೆ. ಅವರನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಇಬ್ಬರು ಯುವಕರು ಪರಾರಿಯಾಗುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹುಬ್ಬಳ್ಳಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಮೃತ ದೇಹವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.










