ನ್ಯೂಸ್ ನಾಟೌಟ್: ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ರಾಜೇಂದ್ರ ಕುಮಾರ್ ದೇಣಿಗೆ ಹಸ್ತಾಂತರ ಮಾಡಿದ್ದಾರೆ.
ಗುತ್ತಿಗಾರು ಪ್ರಾಥಮಿಕ ಕೃಷಿ ಸಹಕಾರ ಸಂಘದ ಸಭಾಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಡಾ. ರಾಜೇಂದ್ರ ಕುಮಾರ್ ಅವರಿಗೆ ಟ್ರಸ್ಟ್ ವತಿಯಿಂದ ನಡೆಸಲಾಗುವ ಆಂಬುಲೆನ್ಸ್ ಸೇವೆ ಮತ್ತು ಇತರ ಕಾರ್ಯಕ್ರಮದ ಬಗ್ಗೆ ಮನವಿ ಸಲ್ಲಿಸಲಾಯಿತು. ತಕ್ಷಣವೇ ಸ್ಪಂದಿಸಿದ ಡಾ. ರಾಜೇಂದ್ರ ಕುಮಾರ್ ಅವರು ದೇಣಿಗೆಯ ಹಸ್ತಾಂತರ ಮಾಡುವ ಮೂಲಕ ತನ್ನಲ್ಲಿರುವ ಸಾಮಾಜಿಕ ಕಾಳಜಿಯೊಂದಿಗೆ ಮಾದರಿಯಾದರು. ಸಹಕಾರ ಸಚಿವ ಸೋಮಶೇಖರ್, ಸಚಿವ ಯಸ್. ಅಂಗಾರ, ಪಿ.ಎ.ಸಿ ಬ್ಯಾಂಕ್ ಅಧ್ಯಕ್ಷ ವೆಂಕಟ್ ದಂಬೆಕೋಡಿ ,ಸಿ.ಎ. ಬ್ಯಾಂಕ್ ಮಾಜಿ ಅಧ್ಯಕ್ಷ ಭರತ್ ಮುಂಡೋಡಿ, ಮಾಜಿ ಮಂಡಲ ಪ್ರಧಾನ ಮುಳಿಯ ತಿಮ್ಮಪಯ್ಯ, ಸಿ. ಎ. ಬ್ಯಾಂಕ್ ಮಾಜಿ ಅಧ್ಯಕ್ಷ ಮುಳಿಯ ಕೇಶವ ಭಟ್, ಸಿ. ಎ. ಬ್ಯಾಂಕ್ ಕಾರ್ಯದರ್ಶಿ ಶರತ್ ಕುಮಾರ್ ಮತ್ತಿತತರರು ಉಪಸ್ಥಿತರಿದ್ದರು. ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ, ಸದಸ್ಯ ಮೋಹನ್ ದಾಸ್ ಶಿರಾಜೆ ದೇಣಿಗೆ ಸ್ವೀಕರಿಸಿದರು.


















