ನ್ಯೂಸ್ ನಾಟೌಟ್ : ದುಷ್ಕರ್ಮಿಗಳ ದಾಳಿಗೆ ಭೀಕರವಾಗಿ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಕುಟುಂಬ ನೋವನ್ನು ಅರಗಿಸಿಕೊಳ್ಳಲಾಗದೆ ಬದುಕುತ್ತಿದೆ. ಈ ಸಂದರ್ಭದಲ್ಲಿ ಆ ಕುಟುಂಬಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಮಗನ ಸಾವಿನ ನೋವಿನಲ್ಲಿರುವ ಪ್ರವೀಣ್ ತಂದೆಗೆ ಇದೀಗ ದಿಢೀರ್ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ತಿಳಿದು ಬಂದಿದೆ. ಪುತ್ರನನ್ನು ಕಳೆದುಕೊಂಡ ಶೋಕದಲ್ಲಿರುವ ಪ್ರವೀಣ್ ರವರ ತಂದೆಗೆ ಹೃದಯ ಬಡಿತದಲ್ಲಿ ಏರುಪೇರು ಉಂಟಾಗಿ ಅಸ್ವಸ್ಥರಾಗಿದ್ದಾರೆ. ಹೀಗಾಗಿ ಆಂಬ್ಯುಲೆನ್ಸ್ ಮೂಲಕ ಬೆಳ್ಳಾರೆ ಆಸ್ಪತ್ರೆಗೆ ಕರೆದುಕೊಂಡು ಹೋಗಿರುವುದಾಗಿ ತಿಳಿದುಬಂದಿದೆ.










