ನ್ಯೂಸ್ ನಾಟೌಟ್: ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಜಾಕೀರ್ ಹಾಗೂ ಶಫಿಕ್ ಅವರನ್ನು ಬಂಧಿಸಿದ್ದೇವೆ ಎಂದು ರಾಜ್ಯ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ನೆಟ್ಟಾರುವಿನಲ್ಲಿರುವ ಪ್ರವೀಣ್ ಅವರ ಮನೆಗೆ ಗುರುವಾರ ಭೇಟಿ ನೀಡಿ ಪ್ರಕರಣದ ತನಿಖೆಯ ಪ್ರಗತಿ ಬಗ್ಗೆ ಅವರು ಮಾಹಿತಿ ನೀಡಿದರು. ಪ್ರವೀಣ್ ಅವರ ಪತ್ನಿ ನೂತನಾ, ತಂದೆ ಶೇಖರ ಪೂಜಾರಿ, ಅಮ್ಮ ರತ್ನಾವತಿ ಅವರಿಂದ ಹೆಚ್ಚಿನ ಮಾಹಿತಿ ಪಡೆದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅಲೋಕ್ ಕುಮಾರ್, ‘ಹತ್ಯೆ ಮಾಡಿದ ಇಬ್ಬರು ‘ಆರೋಪಿಗಳನ್ನು ಬಂಧಿಸಿದ್ದೇವೆ. ನಮಗೆ ಸಿಕ್ಕಿರುವ ಸಾಕ್ಷ್ಯಗಳ ಆಧಾರದಲ್ಲಿ ಇನ್ನಷ್ಟು ವಿಚಾರಣೆ ಸಲುವಾಗಿ ಅವರನ್ನು ಪೊಲೀಸ್ ಕಸ್ಟಡಿಗೆ ಪಡೆದು ಹೆಚ್ಚಿನ ನಡೆಸಬೇಕಿದೆ. ಆಳವಾಗಿ ತನಿಖೆ ನಡೆಸಿದ ಬಳಿಕವಷ್ಟೇ ಅವರ ಜಾಲ ಎಷ್ಟು ವ್ಯಾಪಿಸಿದೆ. ಈ ಕೃತ್ಯದ ಹಿಂದೆ ಯಾರಿದ್ದಾರೆ. ಯಾವುದಾದರೂ ಸಂಘಟನೆಯ ಕೈವಾಡ ಇದೆಯೇ ಎಂಬುದು ತನಿಖೆ ಬಳಿಕ ತಿಳಿಯಲಿದೆ ಎಂಬುದು ತಿಳಿಯಲಿದೆ. ಶೀಘ್ರವೇ ಇದು ಬಹಿರಂಗವಾಗಲಿದೆ” ಎಂದರು.


















