ನ್ಯೂಸ್ ನಾಟೌಟ್ : ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಕಾರು ಎನ್ನಲಾದ ಹ್ಯುಂಡೈ ಇಯೊನ್ ಕಾರು ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ಕಡಕುಂಜದ ನಿರ್ಜನ ಪ್ರದೇಶದಲ್ಲಿ ಇಂದು (ಜು೩೧ಕ್ಕೆ) ಪತ್ತೆಯಾಗಿದೆ.
ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಬಂದ ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಪೂವಯ್ಯ ಹಾಗೂ ಪಡುಬಿದ್ರಿ ಎಸೈ ಪುರುಪೋತ್ತಮ ಪರಿಶೀಲನೆ ನಡೆಸಿದರು. ಬೆರಳಚ್ಚು ತಜ್ಞರು ಆಗಮಿಸುವ ಹಿನ್ನಲೆಯಲ್ಲಿ ಸಾರ್ವಜನಿಕರು ಸ್ಪರ್ಶಿಸಬಾರದು ಎಂಬ ನಿಟ್ಟಿನಲ್ಲಿ ಇಡೀ ಕಾರಿಗೆ ಪ್ಲಾಸ್ಟಿಕ್ ಹೊದಿಕೆ ಹಾಕಿದರು. ಸ್ಥಳೀಯರು ಹೇಳುವಂತೆ ಕಳೆದೆರಡು ದಿನಗಳಿಂದ ಈ ಕಾರು ಈ ಭಾಗದಲ್ಲಿ ಅನಾಥ ಸ್ಥಿತಿಯಲ್ಲಿದ್ದು, ನಾವು ಅಷ್ಟಾಗಿ ಗಮನಿಸಿಲ್ಲ. ಇವತ್ತು ಸಂಶಯಗೊಂಡು ಪೊಲೀಸರಿಗೆ ಮಾಹಿತಿ ನೀಡಿ ಅವರು ಬಂದಾಗ ಕೊಲೆಗೆ ಬಳಸಲಾದ ಕಾರು ಎಂಬುದು ನಮಗೆ ತಿಳಿದಿದೆ ಎಂದು ತಿಳಿಸಿದ್ದಾರೆ.


















