ನ್ಯೂಸ್ ನಾಟೌಟ್: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಭೀಕರವಾಗಿ ಹತ್ಯೆಯಾದ ಬೆನ್ನಲ್ಲೇ ಇದೀಗ ಆರ್ ಎಸ್ ಎಸ್ ಪ್ರಮುಖರೊಬ್ಬರ ಮುಖಕ್ಕೆ ಚಾಕುವಿನಿಂದ ಇರಿದ ಘಟನೆ ಕೋಲಾರ ಜಿಲ್ಲೆಯ ಮಾಲೂರಿನ ಮಾರಿಕಾಂಬ ರಸ್ತೆಯಲ್ಲಿ ನಡೆದಿದೆ.
ಆರ್ ಎಸ್ ಎಸ್ ಪ್ರಮುಖ ರವಿ ಚಾಕು ಇರಿತದಿಂದ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಟಚ್ ಆಗಿದ್ದಕ್ಕೆ ಅಂಗಡಿಯ ಮುಂದೆ ಎರಡು ಗುಂಪುಗಳ ನಡುವೆ ಜಗಳ ಆರಂಭವಾಗಿದೆ. ಈ ವೇಳೆ ಜಗಳ ಬಿಡಿಸಲು ಮುಂದಾದ ರವಿ ಮೇಲೆ ಇಬ್ಬರು ವ್ಯಕ್ತಿಗಳು ಚಾಕುವಿನಿಂದ ಹಲ್ಲೆನಡೆಸಿದ್ದಾರೆ. ರವಿ ಅವರ ಮುಖಕ್ಕೆ ಚಾಕುವಿನಿಂದ ಇರಿಯಲಾಗಿದ್ದು, ಗಂಭೀರವಾಗಿ ಗಾಯಗೊಂ ಡಿರುವ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.










